ಶಿರಸಿ: ಜು.20ರಂದು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ: ಬಣ್ಣದಮಠದಲ್ಲಿ ಚುಟುಕು ಸಾಹಿತ್ಯ ಪರಿಷತ್ ಮನೋಹರ್
ಶಿರಸಿ: ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳ ಉದ್ಘಾಟನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಸಿ.ಪಿ ಬಝಾರ್ ನ ಬಣ್ಣದ ಮಠದಲ್ಲಿ ಜು ೨೦ ರಂದು ಬೆಳಿಗ್ಗೆ ೧೦ ಗಂಟೆಯಿಂದ ಆರಂಭಗೊಳ್ಳಲಿದೆ ಎಂದು ಕಚುಸಾಪ ಶಿರಸಿ ಶೈಕ್ಷಣಿಕ ಜಿಲ್ಲಾಧ್ಯಕ್ಷ ಮನೋಹರ ಮಲ್ಮನೆ ತಿಳಿಸಿದರು. ಅವರು ಬುಧವಾರ ನಗರದ ಬಣ್ಣದ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಹುಬ್ಬಳ್ಳಿ ಶಿರಸಿ ಶೈಕ್ಷಣಿಕ ಜಿಲ್ಲೆ, ಬಣ್ಣದ ಮಠ ಹಾಗೂ ಲಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಮ.ನಿ.ಪ್ರ ಶ್ರೀ ಶಿವಲಿಂಗ ಸ್ವಾಮೀಜಿ ಸಾನ್ನಿಧ್ಯಲ್ಲಿ ಜಿ.ವಿ.ಭಟ್ಟ ಕೊಪ್ಪಲುತೋಟ ಸಮ್ಮೇಳನಾಧ್ಯಕ್ಷತೆಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದರು.