ಧಾರವಾಡ: ನಗರದ ಕಡಪಾ ಮೈದಾನದಲ್ಲಿ ದಸರಾ ಉತ್ಸವದ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿಎಂ ಅನುಮತಿ: ವಿಜಯೋತ್ಸವ
ಧಾರವಾಡ ನಗರದ ಕಡಪಾ ಮೈದಾನದಲ್ಲಿ ದಸರಾ ಉತ್ಸವದ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಕುರಿತು ಸ್ಪಂದನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂತೋಷ ಲಾಡ್ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಸೂಚಿಸಿರುವುದನ್ನು ಸ್ವಾಗತಿಸಿದ ದಸರಾ ಜಂಬೂ ಸವಾರಿ ಉತ್ಸವ ಸಮಿತಿ ಸದಸ್ಯರು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ನಗರದ ಕಡಪಾ ಮೈದಾನದ ಎದುರು ಪಟಾಕಿ ಸಿಡಿಸಿ, ಸಂಭ್ರಮಿಸಿದರು.