ಯಲಹಂಕ ವಿಧಾನಸಭಾ ಕ್ಷೇತ್ರದ ಮಾಚೋಹಳ್ಳಿಯಲ್ಲಿ 1 ಕೊಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಯಲಹಂಕ ಶಾಸಕ ವಿಶ್ವನಾಥ್ ನೂತನ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು. ಮಾಚೋ ಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿತ್ತು. ಹೀಗಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರ ಸಮ್ಮುಖದಲ್ಲಿ ಚಾಲನೆ ನೀಡಲಾಗಿದೆ.