ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಜಲ ಮಂಡಳಿಯ ಕಳಪೆ ಕಾಮಗಾರಿ ಬಯಲಾಗಿದೆ. ಪೈಪ್ ಲೈನ್ ಕಾಮಗಾರಿ ಮುಗಿದು ಒಂದು ವಾರವೂ ಕಳೆಯುವ ಮುನ್ನವೇ ನಡುರಸ್ತೆಯಲ್ಲಿ 6 ರಿಂದ 7 ಕಾಂಕ್ರೀಟ್ ಸ್ಲಾಬ್ಗಳು ಮುರಿದು ಬಿದ್ದಿವೆ. ಇದರಿಂದಾಗಿ ರಸ್ತೆಯಲ್ಲಿದ್ದ ಗುಂಡಿಗೆ ಬಿದ್ದ ಬಸ್ ಅನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಈ ಘಟನೆಯು ಜಲ ಮಂಡಳಿಯ ನಿರ್ಲಕ್ಷ್ಯ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ.