ಮೊಳಕಾಲ್ಮುರು:-ಸ್ಥಳೀಯ ಪೊಲೀಸ್ ಠಾಣೆಯಿಂದ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಗುರುವಾರ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪಿಎಸ್ ಐ ಪಾಂಡುರಂಗಪ್ಪ ಮಾತನಾಡಿ,ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಶಾಂತಿ ಕಾಪಾಡುವಂತಹ ಕೆಲಸ ಪೊಲೀಸ್ ಇಲಾಖೆ ಮಾಡುತ್ತದೆ ಆದರೆ ಯಾವಾಗಲು ಅಪರಾಧವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಅದನ್ನು ಪತ್ತೆ ಹಚ್ಚುವಲ್ಲಿ ಸಾರ್ವಜನಿಕರ ಸಹಕಾರವೂ ಅಗತ್ಯ. ಹಾಗಾಗಿ ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ ಎಂದರು.