ರಾಮದುರ್ಗ: ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ನಗರದಲ್ಲಿ ನಮೋ ಯುವ ರನ್ ಮ್ಯಾರಥಾನ್ ಆಯೋಜನೆ
ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ನಗರದಲ್ಲಿ ನಮೋ ಯುವ ರನ್ ಆಯೋಜನೆ. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾನುವಾರ 'ನಮೋ ಯುವ ರನ್' ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜನರು ಸ್ವಯಂಪ್ರೇರಿತರಾಗಿ ಭಾಗವಹಿಸಿ ಯಶಸ್ವಿಗೊಳಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ನಗರ ಘಟಕದ ಪ್ರಧಾನ ಕಾರ್ಯದರ್ಶಿ ಮುರುಗೇಂದ್ರಗೌಡ ಪಾಟೀಲ್ ಮಾತನಾಡಿ, ನಶೆ ಮುಕ್ತ ಭಾರತ ನಿರ್ಮಾಣಕ್ಕಾಗಿ ಈ ಓಟವನ್ನು ಹಮ್ಮಿಕೊಳ್ಳಲಾಗಿದ. ಜನರು ಸಕ್ರಿಯವಾಗಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದಾರೆ. ನಶೆ ಮುಕ್ತ ಭಾರತಕ್ಕಾಗಿ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು