ಮೈಸೂರು: ಸಂಕಷ್ಟ ಬಂದಾಗಲೆ ಕುರುಬರ ನೆನಪಾಗುತ್ತೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್ಸಿ ಎಚ್. ವಿಶ್ವನಾಥ್ ಟೀಕೆ
Mysuru, Mysuru | Sep 16, 2025 ಮೈಸೂರು : ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಬಂದಾಗಲೆಲ್ಲಾ ಕುರುಬರ ನೆನಪಾಗುತ್ತದೆ. ಇದೀಗ ಸಿದ್ದರಾಮಯ್ಯಗೆ ಸಂಕಷ್ಟ ಬಂದಿದೆ. ಹಾಗಾಗಿ ಕುರುಬ ಸಮುದಾಯವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸುವುದಾಗಿ ಹೇಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕಿಸಿದ್ದಾರೆ. ಮಂಗಳವಾರ ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಮನಸ್ಸು ಮಾಡಿದ್ದರೆ ಎಂದೋ ಈ ಕೆಲಸ ಮಾಡಬಹುದಿತ್ತು ಎಂದರು. ಕುರುಬ ಸಮುದಾಯಕ್ಕೆ ಯಾವುದೇ ಕೊಡುಗೆ ನೀಡದ ಸಿದ್ದರಾಮಯ್ಯ, ಕುರುಬ ಸಮುದಾಯದ ನಾಯಕರನ್ನು ವ್ಯವಸ್ಥಿತವಾಗಿ ತುಳಿದರು. ಕುರುಬ ನಾಯಕರು ಬೆಳೆಯಲು ಸಿದ್ದರಾಮಯ್ಯ ಬಿಡಲಿಲ್ಲ.