ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಗರದಲ್ಲಿಡೆ ಹರಡಿರುವ ಗಾಂಜಾ ಮತ್ತು ಡ್ರಗ್ಸ್ ಚಟುವಟಿಕೆ ಹಾಗೂ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಟ್ ಮಾಫಿಯಾ ಬಗ್ಗೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಡ್ರಗ್ಸ್ ಕಾಲೇಜು ಬಾಗಿಲು ತನಕ ತಲುಪುತ್ತಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಇಲಾಖೆಗೆ ಮಾಹಿತಿ ಇಲ್ಲವೇ ಎಂದು ಸದಸ್ಯರು ಆರೋಪಿಸಿದರು.