ಶಿವಮೊಗ್ಗ: ಬಂಜಾರ ಸಂಘದಿಂದ ಪ್ರತಿಭಾ ಪುರಸ್ಕಾರ ನಗರದಲ್ಲಿ ಮಾಹಿತಿ ನೀಡಿದ ಸಂಘದ ಕಾರ್ಯದರ್ಶಿ ವಿನಾಯಕ್
ಶಿವಮೊಗ್ಗ ತಾಲೂಕು ಬಂಜಾರ ಸಂಘದ ವತಿಯಿಂದ 2024-2025 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾವಂತ ಸಮಾಜದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತಿವರ್ಷದಂತೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ವಿನಾಯಕ್ ತಿಳಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅಂಕಪಟ್ಟಿ ಎರಡು ಭಾವಚಿತ್ರವನ್ನು ಜ.15ರ ಒಳಗಾಗಿ ಸಂಘದ ಕಚೇರಿಗೆ ತಲುಪಿಸಬೇಕು ಎಂದು ತಿಳಿಸಿದ್ದಾರೆ.