ನೆಲಮಂಗಲ: ಬಿನ್ನಮಂಗಲ ಬಳಿ ಕೆಟ್ಟು ನಿಂತಿದ್ದ ಲಾರಿಗೆ ಅಡ್ಡಲಾಗಿ ಇಟ್ಟಿದ್ದ ಬ್ಯಾರಿಕೇಟ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನ ಮೇಲೆ ಹರಿದ ಲಾರಿ ಸವಾರ ಸಾವು
ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವು... ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ನೆಲಮಂಗಲದ ಬಿನ್ನಮಂಗಲ ಬಳಿ ಲಾರಿ ಹರಿದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಯಂಟಗಾನಹಳ್ಳಿ ಸಮೀಪ ಪಾಳ್ಯ ಗ್ರಾಮದ ರವಿಕುಮಾರ್ 36 ಹೊಟ್ಟೆ ಮೇಲೆ ಲಾರಿ ಹರಿದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಈತ ಫೋಟೋ ಗ್ರಾಫರ್ ವೃತ್ತಿ ಮಾಡಿಕೊಂಡಿದ್ರು ಎನ್ನಲಾಗಿದೆ. ಸದ್ಯ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನೆಲಮಂಗಲ ಸಂಚಾರಿ ಪ