ಪಟ್ಟಣದಲ್ಲಿ ಬೈಲಹೊಂಗಲ ಜಿಲ್ಲಾ ಘೋಷಣೆಗೆ ಸಂಪೂರ್ಣ ಬಂದ್. ಬೈಲಹೊಂಗಲ ಪ್ರತ್ಯೇಕ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿ, ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಯಿತು. ವ್ಯಾಪಾರಸ್ಥರು ಮತ್ತು ವಿವಿಧ ಸಂಘಟನೆಗಳು ಈ ಹೋರಾಟದಲ್ಲಿ ಭಾಗವಹಿಸಿದ್ದವು. ಮೂರುಸಾವಿರ ಮಠದ ಪ್ರಭುಲಿಂಗ್ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತ್ಯೇಕ ಜಿಲ್ಲಾ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಶನಿವಾರ ಬೈಲಹೊಂಗಲ ಸಂಪೂರ್ಣ ಬಂದ್ ಮಾಡಲಾಗಿತ್ತು