ಚಳ್ಳಕೆರೆ: ಜೀವ ಮತ್ತು ಜೀವನ ಅಮೂಲ್ಯವಾದದ್ದು ಹಾಗಾಗಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು:ನಾಯಕನಹಟ್ಟಿಯಲ್ಲಿ ಪಿಎಸ್ಐ ಪಾಂಡುರಂಗಪ್ಪ
ಚಳ್ಳಕೆರೆ:-ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ನಾಯಕನಹಟ್ಟಿ ಪಿಎಸ್ ಐ ಪಾಂಡುರಂಗಪ್ಪ ಹೇಳಿದರು. ನಾಯಕನಹಟ್ಟಿ ಪಟ್ಟಣದಲ್ಲಿ ಸೋಮವಾರದಂದು ಹೆಲ್ಮೆಟ್ ಜಾಗೃತಿ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಕುರಿತು ನಡೆದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಅಧಿಕ.ಹೆಲ್ಮೆಟ್ ಹಾಕದೆ ತಲೆಗೆ ಪೆಟ್ಟಾಗಿ ಸಾವನ್ನಪ್ಪಿರುವವರು ಹೆಚ್ಚಾಗಿದ್ದಾರೆ. ಇದಕ್ಕೆ ಹೆಲ್ಮೆಟ್ ಧರಿಸದಿರುವುದೇ ಮುಖ್ಯ ಕಾರಣ ಎಂದರು.