ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ವಿರುದ್ಧ ಡಿಸೆಂಬರ್ 17ರಂದು ಜಿಲ್ಲಾ ಬಂಜಾರ ಸಂಘ,ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಕೋಲಂಬೋ ಸಮುದಾಯದ ವಿವಿಧ ಸಂಘಟನೆಗಳಿಂದ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಮುಖಂಡ ನಾನ್ಯಾನಾಯ್ಕ್ ಶಿವಮೊಗ್ಗ ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವು ಸುಪ್ರೀಂ ಕೋರ್ಟ್ ನ ಮಾನದಂಡಗಳು ಹಾಗೂ ಹಲವು ಆಯೋಗಗಳ ಶಿಫಾರಸುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ಆರೋಪಿಸಿದರು.