ಕೋಲಾರ: ಸೂಲೂರು ಗ್ರಾಪಂ ವ್ಯಾಪ್ತಿಯ ರಸ್ತೆಗಳಿಗೆ ೫ ಕೋಟಿ ಅನುದಾನ ; ತಲಗುಂದ ಬಳಿ ಪೆಮ್ಮಶೆಟ್ಟಿಹಳ್ಳಿ ಸುರೇಶ್
Kolar, Kolar | Nov 20, 2025 ಸೂಲೂರು ಗ್ರಾಪಂ ವ್ಯಾಪ್ತಿಯ ರಸ್ತೆಗಳಿಗೆ ೫ ಕೋಟಿ ಅನುದಾನ ; ಪೆಮ್ಮಶೆಟ್ಟಿಹಳ್ಳಿ ಸುರೇಶ್ ಕೋಲಾರ: ತಲಗುಂದ ಗೇಟ್ ನಿಂದ ನುಗ್ಗಲಾಪುರ ವರೆಗಿನ ಸಂಪರ್ಕ ಕಲ್ಪಿಸುವ ರಸ್ತೆಗೆ ೧.೫೦ ಕೋಟಿ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಚಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಸುಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಸುಮಾರು ವರ್ಷಗಳಿಂದ ಅಭಿವೃದ್ಧಿ ಮಾಡಬೇಕೆಂದು ಶಾಸಕರ ಗಮನಕ್ಕೆ ತಂದಿದ್ದರು ಅದೇ ರೀತಿ ಚುನಾವಣೆ ಸಮಯದಲ್ಲಿ ನಾನು ಸಹ ಮಾತು ಕೊಟ್ಟಿದಂತೆ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಪ್ರತಿಯೊಂದು ಹಳ್ಳಿಗೂ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮುಂದಾಗಿದ್ದಾರೆ ಅದರಂತೆ ಸೂಲೂರು ಗ್ರಾಪಂ ವ್ಯಾಪ್ತಿಯ ರಸ್ತೆಗಳಿಗೆ