ಸಂಡೂರು: ತಾಲ್ಲೂಕಿನ ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳಲ್ಲಿ ವಿವಿಧೆಡೆ ದಾಳಿ, ಓರ್ವ ಬಾಲಕಾರ್ಮಿಕನ ರಕ್ಷಣೆ
Sandur, Ballari | Nov 13, 2025 ಸಂಡೂರು ತಾಲ್ಲೂಕಿನ ಕುಡತಿನಿ, ತೋರಣಗಲ್ಲು ಮತ್ತು ವಡ್ಡು ಗ್ರಾಮಗಳ ಮುಖ್ಯ ರಸ್ತೆಗಳಲ್ಲಿನ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ ಕೆಲಸ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿ ಓರ್ವ ಬಾಲಕಾರ್ಮಿಕನನ್ನು ರಕ್ಷಿಸಲಾಗಿದೆ. ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ತಹಶೀಲ್ದಾರರ ನೇತೃತ್ವದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ ಎಂಬ ಮಾಹಿತಿ ನ.13, ಗುರುವಾರ ಸಂಜೆ 4ಕ್ಕೆ ತಿಳಿದುಬಂದಿದೆ. ಮಗುವಿನ ಹೇಳಿಕೆಯನ್ನು ಸ್ಥಳದಲ್ಲಿ ಪಡೆದುಕೊಂಡು ಪುನ