ತೀರ್ಥಹಳ್ಳಿ: ಸೊಪ್ಪುಗಡ್ಡೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಭೇಟಿ, ಪರಿಶೀಲನೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗಡ್ಡೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಭಾನುವಾರ ಸಂಜೆ 5 ಗಂಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವರು ವಿವಿಧ ಕಾರಣಕ್ಕಾಗಿ ಬುದ್ಧಿಮಾಂದ್ಯತೆಯಿಂದ ಜನಿಸುವ ಮಕ್ಕಳ ಲಾಲನೆ-ಪಾಲನೆ ಮಾಡುವುದು ಪಾಲಕರಿಗೆ ನಿತ್ಯವೂ ಸವಾಲಿನ ಕೆಲಸವಾಗಿದೆ. ಆದರೆ ಬುದ್ಧಿಮಾಂದ್ಯ ಮಕ್ಕಳು ಸಾಮಾನ್ಯ ಮಕ್ಕಳಂತೆ ಬದುಕಬಹುದು, ದೈಹಿಕ ಹಾಗೂ ಮಾನಸಿಕ ಸಮಸ್ಯೆ ಹೊಂದಿರುವ ಮಕ್ಕಳು ಸಾಮಾನ್ಯ ಸ್ಥಿತಿಗೆ ಬರಲು ಭೌತಿಕ ಸಾಮಗ್ರಿಗಳ ಅವಶ್ಯವಿದ್ದು ಇದಕ್ಕೆ ಎಲ್ಲರ ಸಹಕಾರದಿಂದಾಗಿ ಇತರ ಸಾಮಾನ್ಯ ಮಕ್ಕಳಂತೆ ಸಹಜ ಸ್ಥಿತಿಗೆ ತರಲು ಸಾಧ್ಯವಿದೆ ಎಂದರು