ಶ್ರೀರಂಗಪಟ್ಟಣ: ಪಟ್ಟಣದಲ್ಲಿ ಧಾರಾಕಾರ ಮಳೆಗೆ ಮನೆ ಕುಸಿತ,ಕುಟುಂಬದವರು ಪಾರು
ಶ್ರೀರಂಗಪಟ್ಟಣದಲ್ಲಿ ಧಾರಾಕಾರ ಮಳೆಗೆ ಮನೆ ಕುಸಿತ ಗೊಂಡು ಕುಟುಂಬದವರು ಪಾರಾಗಿರುವ ಘಟನೆ ಜರುಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ನಲ್ಲಿ ಧಾರಾಕಾರ ಮಳೆಯಿಂದಾಗಿ ಮನೆ ಕುಸಿದ ಘಟನೆ ನಡೆದಿದೆ. ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಜಯರಾಮ್ ಕುಟುಂಬದ ನಾಲ್ವರು ಸದಸ್ಯರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಮನೆ ಸಂಪೂರ್ಣ ಕುಸಿದು ಬಿದ್ದ ಪರಿಣಾಮ, ಕುಟುಂಬವು ವಾಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದೆ. ಸೂಕ್ತ ಪರಿಹಾರಕ್ಕಾಗಿ ಈ ಬಡ ಕುಟುಂಬ ತಾಲೂಕು ಆಡಳಿತಕ್ಕೆ ಸೂಕ್ತ ಪರಿಹಾರ ಕೊಡಿಸುವಂತೆ ಮನವಿ ಮಾಡಿಕೊಂಡಿದೆ.