ಕುಮಟಾ: ಸರ್ಕಾರ ಮಾತು ಕೊಟ್ಟಂತೆ ಗೌರವಧನ ಹೆಚ್ಚಿಸಲಿ ಪಟ್ಟಣದ ಮಣಕಿ ಮೈದಾನದಲ್ಲಿ ಆಶಾ ಕಾರ್ಯಕರ್ತೆಯರಿಂದ ಆಗ್ರಹ
ರವಿವಾರ ಸಂಜೆ 4ಕ್ಕೆ ಕುಮಟಾದ ಮಣಕಿ ಮೈದಾನದಲ್ಲಿ ಆಶಾ ಕಾರ್ಯಕರ್ತೆಯರು ಸಮಾವೇಶ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಘೋಷಿಸಿದ ಕನಿಷ್ಠ 10 ಸಾವಿರ ರೂ. ಗೌರವಧನವನ್ನು ಕೂಡಲೇ ಜಾರಿಗೆ ತರುವಂತೆ ಒತ್ತಾಯಿಸಿ ಕುಮಟಾ ತಾಲ್ಲೂಕಿನ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ಎಐಯುಟಿಯುಸಿ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ಪಟ್ಟಣದ ಮಣಕಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಕಾರ್ಯಕರ್ತೆಯರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಂಘದ ರಾಜ್ಯ ಉಪಾಧ್ಯಕ್ಷ ಗಂಗಾಧರ ಬಡಿಗೇರ ಸರ್ಕಾರ ಈ ಬಗ್ಗೆ ಶೀಘ್ರವೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.