ರಾಯಚೂರು: ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯ ಸಿಂಧನೂರು ಪಟ್ಟಣದ ತಹಸಿಲ್ದಾರ್ ಕಚೇರಿ ಮುಂದೆ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ಅಲ್ಪಸಂಖ್ಯಾತರ ಬಾಲಕಿಯರ ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ತಹಸಿಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಬುಧುವಾರ ಮಧ್ಯಾಹ್ನ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಜನ ವಿದ್ಯಾರ್ಥಿನಿಯರು ಮಾತನಾಡಿ, ವಸತಿ ನಿಲಯದ ಸುತ್ತಮುತ್ತ ಕುಡುಕರ ಹಾವಳಿ ಹೆಚ್ಚಾಗಿದೆ ಮತ್ತು ವಸತಿ ನಿಲಯದಲ್ಲಿರುವ ಅಡುಗೆ ಸಿಬ್ಬಂದಿ ಮತ್ತು ವಾರ್ಡನ್‌ರನ್ನು ಬದಲಾವಣೆ ಮಾಡುವಂತೆ ಆಗ್ರಹಿಸಿದ್ದಾರೆ. ಬೇಡಿಕೆ ಈಡೇರಿಸದಿದ್ದಲ್ಲಿ ಮತ್ತಷ್ಟು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.