ಬಂಟ್ವಾಳ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು
ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿ, ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತೂರು ತಾಲೂಕಿನ ಬಲ್ಯ ನಿವಾಸಿ ಹಿಬ್ಬತುಲ್ಲನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.