ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನ ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಸ್ಥಳಕ್ಕೆ ಶಾಸಕ ಚನ್ನಬಸಪ್ಪ ಭೇಟಿ
ಶಿವಮೊಗ್ಗ ನಗರದ ಗಾಂಧಿ ಬಜಾರ್ ನ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು ಮಂಗಳವಾರ ಬೆಳಿಗ್ಗೆ ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ಸೋಮವಾರ ರಾತ್ರಿ ನೆಗದ ಗಾಂಧಿ ಬಜಾರ್ ನ ಉಪ್ಪಾರ ಕೆರಿಯ 2ನೇ ತಿರುವಿನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಶಾಸಕ ಚನ್ನಬಸಪ್ಪ ,ಪಾಲಿಕೆಯ ಆಯುಕ್ತರಾದಂತಹ ಕವಿತ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿದ್ದು, ಈ ಹಿನ್ನೆಲೆ ದೊಡ್ಡ ಅನಾಹುತ ತಪ್ಪಿದೆ ಎಂದರು. ಮುಂಬರುವ ದಿನಗಳಲ್ಲಿ ಇಂತಹ ಅಗ್ನಿ ಅನಾಹುತಗಳು ಸಂಭವಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.