ಆಳಂದ: ಲೋಕಸಭೆ ಚುನಾವಣೆ ಹಿನ್ನೆಲೆ ಆಳಂದ ವಿಧಾನ ಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಯಾಗಿ ಮಹಾಂತೇಶ ನೇಮಕ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಗುರುವಾರ ತಿಳಿಸಿದ್ದಾರೆ. ಆಳಂದ ವಿಧಾನಸಭಾ ಕ್ಷೇತ್ರಕ್ಕೆ ಭೂ-ದಾಖಲೆಗಳ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಅವರನ್ನು ನೇಮಿಸಲಾಗಿದೆ. ಅವರ ದೂರವಾಣಿ ಸಂಖ್ಯೆ 9742971570ಗೆ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದ್ದಾರೆ.