ಕೃಷ್ಣರಾಜನಗರ: ಪಟ್ಟಣದಲ್ಲಿ ತಾಲ್ಲೂಕಾಡಳಿತದಿಂದ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ
ಪಟ್ಟಣದಲ್ಲಿ ತಾಲ್ಲೂಕಾಡಳಿತದಿಂದ ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಮಾಡಲಾಯಿತು. ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಚಾಲನೆ ನೀಡಿದರು. ಬಾಬು ಜಗಜೀವನ್ ರಾಮ್ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಸರಳವಾಗಿ ಜಯಂತಿ ಆಚರಿಸಲಾಗುತ್ತಿದ್ದು, ಸಹಕಾರ ನೀಡಿದ ಸಮಾಜದ ಪ್ರತಿಯೊಬ್ಬರಿಗೂ ಕೃತಜ್ಞತೆ ಎಂದರು.