ಬೀದರ್: ನಗರದ ಪಾಪನಾಶ ದೇವಾಲಯಕ್ಕೆ ಕೇಂದ್ರ ಸಚಿವ ಖೂಬಾ ಭೇಟಿ, ವಿಶೇಷ ಪೂಜೆ ಸಲ್ಲಿಕೆ
Bidar, Bidar | Mar 8, 2024 ಮಹಾಶಿವರಾತ್ರಿ ಪ್ರಯುಕ್ತ ನಗರದ ಕೋಟಿ ಪಾಪನಾಶ ಲಿಂಗ ದೇವಾಲಯಕ್ಕೆ ಶುಕ್ರವಾರ ಕೇಂದ್ರ ಸಚಿವ ಭಗವಂತ ಖೂಬಾ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು. ಜನತೆಯ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಬೀದರ್ ಜಿಲ್ಲೆ ಜನತೆಗೆ ಶಿವರಾತ್ರಿ ಉಡುಗೊರೆ ನೀಡಿದ್ದು, ₹22 ಕೋಟಿ ಅನುದಾನ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದಾರೆ ಎಂದು ತಿಳಿಸಿದರು.