ಬೆಂಗಳೂರು ಉತ್ತರ: ಮೋದಿ ಬರ್ತ್ಡೇ ನಿಮಿತ್ತ ಡಾಲರ್ಸ್ ಕಾಲೋನಿಯಲ್ಲಿ ಪೌರಕಾರ್ಮಿಕರ ಜೊತೆ ಸೇರಿ ಕಸಗುಡಿಸಿ ಶ್ರಮದಾನ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಪೊರಕೆ ಹಿಡಿದು ಕಸ ಗುಡಿಸಿ, ಸ್ವಚ್ಚತಾ ಕಾರ್ಯ ಕೈಗೊಂಡರು. ಬುಧವಾರ ಮಧ್ಯಾಹ್ನ ೨ ಗಂಟೆ ಸುಮಾರಿಗೆ ಡಾಲರ್ಸ್ ಕಾಲನಿಯ ಧವಳಗಿರಿ ನಿವಾಸದ ಬಳಿ ಸೇವಾ ಪಾಕ್ಷಿಕ ಅಭಿಯಾನದಡಿ ಪೌರ ಕಾರ್ಮಿಕರ ಜತೆ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪೊರಕೆ ಹಿಡಿದು ರಸ್ತೆಯಲ್ಲಿದ್ದ ಒಣ ತ್ಯಾಜ್ಯವನ್ನು ವಿಲೇವಾರಿ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದರು.