ಮುಳಬಾಗಿಲು: ನವಂಬರ್ 16 ರಂದು ಅದ್ದೂರಿಯಾಗಿ ಗಡಿನಾಡೋತ್ಸವ ಆಚರಣೆಗೆ ಸಕಲ ಸಿದ್ಧತೆ ಶಾಸಕ ಸಮೃದ್ಧಿ ಮಂಜುನಾಥ್
Mulbagal, Kolar | Oct 18, 2025 ನವಂಬರ್ 16 ರಂದು ಅದ್ದೂರಿಯಾಗಿ ಗಡಿನಾಡೋತ್ಸವ ಆಚರಣೆಗೆ ಸಕಲ ಸಿದ್ಧತೆ ಶಾಸಕ ಸಮೃದ್ಧಿ ಮಂಜುನಾಥ್ ನವಂಬರ್ ಒಂದರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಆಚರಣೆ ಮಾಡಿ ನವಂಬರ್ 16ರಂದು ಕನ್ನಡ ರಾಜ್ಯೋತ್ಸವ ಹಾಗೂ ಗಡಿನಾಡೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಸಮೃದ್ಧಿ ಮಂಜುನಾಥ್ ಶನಿವಾರ ಮಧ್ಯಾಹ್ನ 2 ಗಂಟೆಯಲ್ಲಿ ತಾಲೂಕು ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಮಾಹಿತಿ ನೀಡಿದರು