ಬೆಂಗಳೂರು ಉತ್ತರ: ಮತಗಳ್ಳತನಕ್ಕೆ ಅವಕಾಶ ನೀಡಬೇಡಿ - ರಾಜ್ಯದ ಜನರಿಗೆ ಸಿಎಂ ಕರೆ
ಸಂವಿಧಾನದ ರಕ್ಷಣೆ ಕರ್ತವ್ಯವನ್ನು ಎಲ್ಲರೂ ತಪ್ಪದೇ ನಿರ್ವಹಿಸಲೇಬೇಕು.ಪ್ರಜಾಪ್ರಭುತ್ವದ ರಕ್ಷಣೆಯಿಂದ ದೇಶದ ಜನರ ರಕ್ಷಣೆ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸೆಪ್ಟೆಂಬರ್ 15ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘’ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ’ ಎಂದರು. ಆದರೆ ಇದರ ದುರುಪಯೋಗಪಡಿಸಿಕೊಂಡು, ಸಂವಿಧಾನವನ್ನು ದುರ್ಬಲಗೊಳಿಸುವ ಕುತಂತ್ರ ನಡೆಯುತ್ತಿದ್ದು, ಇದನ್ನು ನಡೆಯದಂತೆ ನೋಡಿಕೊಳ್ಳಬೇಕಿದೆ'' ಎಂದು ಅವರು ತಿಳಿಸಿದರು.