ಚಾಮರಾಜನಗರ: ಪೊಲೀಸರು ಆರೋಗ್ಯ ಕಡೆ ಹೆಚ್ಚು ನಿಗಾ ವಹಿಸಿ : ನಗರದಲ್ಲಿ ಎಸ್ಪಿ. ಡಾ. ಬಿ.ಟಿ. ಕವಿತಾ
ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ನೆಮ್ಮದಿಯ ಜೀವನ ನಡೆಸುವಂತೆ ಮಾಡಲು ಶ್ರಮಿಸುತ್ತಿರುವ ಪೊಲೀಸರು ಮತ್ತು ಕುಟುಂಬದವರು ಕರ್ತವ್ಯದ ಒತ್ತಡದ ನಡುವೆಯು ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ತಿಳಿಸಿದರು. ಚಾಮರಾಜನಗರದ ಡಾ. ರಾಜಕುಮಾರ್ ಕಲಾ ಮಂದಿರದಲ್ಲಿ ನಾರಾಯಣ ಆಸ್ಪತ್ರೆಯ ಹಾಗೂ ರೋಟರಿ ವತಿಯಿಂದ ಪೊಲೀಸರು ಹಾಗೂ ಅವರ ಕುಟುಂಬ ವರ್ಗದವರಿಗೆ ಆಯೋಜನೆ ಮಾಡಿದ್ದ ಬೃಹತ್ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.