ಶಿವಮೊಗ್ಗ: ನೆಟ್ ವರ್ಕ್ ಸಮಸ್ಯೆಯಿಂದಾಗಿ ಗಣತಿ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ, ಶಿವಮೊಗ್ಗದಲ್ಲಿ ಸಿಇಓ ಹೇಮಂತ್
ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಕೆಲವು ಆಯ್ದ ಭಾಗಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದಾಗಿ ಗಣತಿ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಹೇಮಂತ್ ಹೇಳಿದರು. ಶಿವಮೊಗ್ಗದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಮಾತನಾಡಿದ ಅವರು, ಈ ಸಮೀಕ್ಷೆಯನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಪರ್ಯಾಯ ಕ್ರಮಗಳನ್ನು ಕೈಗೊಂಡಿದ್ದು, ಸಮೀಪದ ಗ್ರಾಮ ಪಂಚಾಯಿತಿ ಅಥವಾ ಶಾಲೆಗಳಲ್ಲಿ ನೆಟ್ ವರ್ಕ್ನ ಸೌಲಭ್ಯವಿರುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ. 250ಕ್ಕೂ ಹೆಚ್ಚಿನ ಸ್ಥಳಗಳನ್ನು ಗುರುತಿಸಿ, ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.