ಆನೇಕಲ್: ಕೆಂಚಗಯ್ಯನದೊಡ್ಡಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಯುವಕರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಗಯ್ಯನ ದೊಡ್ಡಿ ಗ್ರಾಮದಲ್ಲಿ ಇಂದು ಘಟನೆ ನಡೆದಿದೆ. 30 ವರ್ಷದ ಸುರೇಶ್ ಸಾವನ್ನಪ್ಪಿರುವ ಯುವಕ. ಕಾಂತರಾಜು ಅಂಡ್ ಗ್ಯಾಂಗ್ ಬಾರ್ ನಲ್ಲಿ ಮದ್ಯಪಾನ ಮಾಡುವ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಬಳಿ ಕಾಂತರಾಜು ಸುರೇಶನನ್ನ ಹಿಂಬಾಲಿಸಿ ಬಂದು ಮನೆ ಬಳಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ