ಮಂಡ್ಯ: ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿಕೃತಿಯನ್ನು ಕತ್ತೆ ಮೇಲೆ ಇರಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ
Mandya, Mandya | Sep 20, 2025 ದಲಿತ ಮಹಿಳೆಯರನ್ನು ಅಪಮಾನ ಮಾಡಿರುವ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಪ್ರತಿ ಕೃತಿಯನ್ನು ಕತ್ತೆ ಮೇಲೆ ಇರಿಸಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಕತ್ತೆ ಮೇಲೆ ಯತ್ನಾಳ್ ಪ್ರತಿ ಕೃತಿ ಇರಿಸಿ ಧಿಕ್ಕಾರದ ಘೋಷಣೆ ಕೂಗಿ ಪ್ರತಿ ಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು ಈ ವೇಳೆ ಪೊಲೀಸರ ಜೊತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದರು. ವಿರೋಧದ ನಡುವೆಯೂ ಪೊಲೀಸರು ಪ್ರತಿ ಕೃತಿಯನ್ನು ಕಿತ್ತೊಯ್ದರು. ಮೈಸೂರು ಮಹೋತ್ಸವದ ವೇಳೆ ಚಾಮುಂಡೇಶ್ವರಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂವು ಮುಡಿಸಬೇಕು, ದಲಿತ ಮಹಿಳೆಯರಿಗೂ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್ ದಲಿತ ಸಮುದಾಯದ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದರು.