ಹನೂರು: ಕಾಡುಪ್ರಾಣಿಗಳ ಭಯದಲ್ಲೇ ನಿತ್ಯ 7 ಕಿಮೀ ನಡೆದು ಶಾಲೆಗೆ ಹೋಗುವ ಪಚ್ಚೆದೊಡ್ಡಿ ವಿದ್ಯಾರ್ಥಿಗಳು: ಸಿಎಂಗೆ ಮನವಿ
ಹನೂರು : ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವಿದ್ಯಾರ್ಥಿನಿಯರು ದಿನನಿತ್ಯ ಎದುರಿಸುತ್ತಿರುವ ಸಮಸ್ಯೆಯ ಕುರಿತು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ರ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಪಚ್ಚೆದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಬಸ್ ಸಂಚಾರವಿಲ್ಲ, ವಾಹನ ಸಂಚಾರವೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಅತಿ ಕೆಟ್ಟ ಸ್ಥಿತಿಯಲ್ಲಿರುವುದರಿಂದ ಗ್ರಾಮದ ವಿದ್ಯಾರ್ಥಿಗಳು ಪ್ರತಿದಿನ ಸುಮಾರು 7 ಕಿಲೋಮೀಟರ್ ದೂರವನ್ನು ನಡೆದುಕೊಂಡೇ ಶಾಲೆ–ಕಾಲೇಜಿಗೆ ತೆರಳಬೇಕಾದ ದುಸ್ಥಿತಿ ಎದುರಿಸುತ್ತಿದ್ದೆವೆ ಎಂದು ಸಿಎಂ ಗೆ ಒತ್ರ ಬರೆದು ಮನವಿ ಸಲ್ಲಿಸಿದ್ದಾರೆ