ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಗಲಕೋಟೆ ಪೊಲೀಸರು..ಮುಂಬರುವ ಕಾರ್ತಿಕೋತ್ಸವದ ಹಿನ್ನೆಲೆಯಲ್ಲಿ, ಸಾರ್ವಜನಿಕ ವಾಹನಗಳ ಸಂಚಾರ ಸೌಕರ್ಯ ಹಾಗೂ ಪಾರ್ಕಿಂಗ್ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಆವರಣದ ಸ್ಥಳಗಳನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ಸುಗಮವಾದ ಸಂಚಾರ ಮತ್ತು ಭದ್ರತಾ ವ್ಯವಸ್ಥೆ ಕಲ್ಪಿಸಲು, ಹಾಗೂ ಯಾವುದೇ ಅನಾನುಕೂಲ ಆಗದಂತೆ ಕ್ರಮ ವಹಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಅಗತ್ಯ ಸೂಚನೆಗಳನ್ನು ನೀಡಿದರು.