ಗ್ರಾಹಕರ ಆಯೋಗ ಬೆಳಗಾವಿ ಪೀಠಕ್ಕೆ ಖಾಯಂ ನ್ಯಾಯಾಧೀಶರನ್ನು ನೇಮಿಸಬೇಕು ಎಂದು ಆಗ್ರಹಿಸಿ ವಕೀಲರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿಯ ಗ್ರಾಹಕರ ಆಯೋಗದ ಬೆಳಗಾವಿ ಪೀಠಕ್ಕೆ ಖಾಯಂ ನ್ಯಾಯಾಧೀಶರನ್ನು ನೇಮಿಸಬೇಕೆಂದು ಆಗ್ರಹಿಸಿ ಸೋಮವಾರ ನಗರದಲ್ಲಿ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ವಕೀಲರು ಪ್ರತಿಭಟನೆ ನಡೆಸಿದರು. ಖಾಯಂ ನ್ಯಾಯಾಧೀಶರನ್ನು ನೇಮಿಸಿ, ಗ್ರಾಹಕರಿಗೆ ನ್ಯಾಯ ಒದಗಿಸಬೇಕು. ಅಲ್ಲದೇ ಹಿರಿಯ ಮತ್ತು ಕಿರಿಯ ವಕೀಲರಿಗೆ ಸಮಾನ ಅವಕಾಶವನ್ನು ನ್ಯಾಯಾಲಯದಲ್ಲಿ ನೀಡಬೇಕು ಎಂದು ಆಗ್ರಹಿಸಿದರು