ಯಾದಗಿರಿ: ಮುಖ್ಯಮಂತ್ರಿಗಳು ಅತಿವೃಷ್ಟಿ ಪರಿಹಾರ ಘೋಷಿಸದಿದ್ದಲ್ಲಿ ಮುತ್ತಿಗೆ ಹಾಕುವುದಾಗಿ, ನಗರದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲನಗೌಡ
Yadgir, Yadgir | Sep 16, 2025 ಕಳೆದ ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಯಾದಗಿರಿ ಜಿಲ್ಲೆಯ ರೈತರ ಬೆಳೆಗಳು ಸಂಪೂರ್ಣವಾಗಿ ಹಾಳಾಗಿದ್ದು ಆದ್ದರಿಂದ ರೈತರ ಕಷ್ಟವನ್ನು ಅರಿತು ಮುಖ್ಯಮಂತ್ರಿಗಳು ಬುಧವಾರ ಕಲಬುರ್ಗಿಗೆ ಆಗಮಿಸಿದಾಗ ಅತಿವೃಷ್ಟಿಯ ಪರಿಹಾರವನ್ನು ಘೋಷಿಸಬೇಕು ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ಮುಖ್ಯಮಂತ್ರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಯಾದಗಿರಿ ನಗರದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಎಚ್ಚರಿಸಿದ್ದಾರೆ.