ಚಿತ್ರದುರ್ಗ: ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ನ 26ಕ್ಕೆ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ, ನಗರದಲ್ಲಿ ಮುಖಂಡರಾದ ಯಾದವ ರೆಡ್ಡಿ
ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ನವೆಂಬರ್ 26 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾಗಿ ಯಾದವ ರೆಡ್ಡಿ ಅವರು ತಿಳಿಸಿದ್ದಾರೆ. ಬುದವಾರ ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಿದ ಯಾದವ ರೆಡ್ಡಿ ಅವರು ಮಾತನಾಡಿದ್ದು ಇದೇ ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂಪಾರ್ಕ್ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ, ಜನಚಳವಳಿಗಳು ನಿರಂತರವಾಗಿ ಒತ್ತಾಯಿಸುತ್ತಾ ಬರುತ್ತಿರುವ, ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಮಾತುಕೊಟ್ಟಿದ್ದ, ಹದಿನೈದು ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕಾಗಿ ಆಗ್ರಹಿಸಿ ಕೇಂದ್ರ ಸರ್ಕಾರದ ನೀತಿಗಳನ್ನು ಧಿಕ್ಕರಿಸಿ ಸಮಾವೇಶ ಹಮ್ಮಿಕೊಂಡಿದ್ದಾಗಿ ಮಾಹಿತಿ ನೀಡಿದ್ದಾರೆ.