ಬಳ್ಳಾರಿ: ಮಕ್ಕಳನ್ನು ದೇಶದ ಭವಿಷ್ಯದ ಶಿಲ್ಪಿಗಳಾಗಿ ಮಾಡುವುದು ಎಲ್ಲರ ಕರ್ತವ್ಯ, ನಗರದಲ್ಲಿ ಅಂತರಾಷ್ಟ್ರೀಯ ದತ್ತು ಮಾಸಚರಣೆ
ಮಕ್ಕಳನ್ನು ದೇಶದ ಭವಿಷ್ಯದ ಶಿಲ್ಪಿಗಳಾಗಿ ಮಾಡುವುದು ಪೋಷಕರು, ಶಿಕ್ಷಕರು ಮತ್ತು ಅಧಿಕಾರಿಗಳ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು. ಅಂತರಾಷ್ಟಿçಯ ದತ್ತು ಮಾಸಾಚರಣೆ ಪ್ರಯುಕ್ತ ನಗರದ ಕಂಟೋನ್ ಮೆಂಟ್ ನ ಪ್ರದೇಶದ ಶಾಂತಿಧಾಮ ಆವರಣದಲ್ಲಿ ನ.15,ಶನಿವಾರ ಮಧ್ಯಾಹ್ನ 12ಗಂಟೆಗೆ ಏರ್ಪಡಿಸಿದ್ದ ಮಕ್ಕಳ ದಿನಾಚರಣೆ ಮತ್ತು ನಾಮಕರಣ ಶಾಸ್ತ್ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜವಾಹರಲಾಲ್ ನೆಹರು ಅವರ ಜನ್ಮದಿನದ ಸವಿನೆನಪಿಗಾಗಿ ನ.14ರಂದು ಮಕ್ಕಳ ದಿನಾಚರಣೆ ಆಚರಿಸ