ರಸ್ತೆ ಅಪಘಾತಗಳ ತಡೆಗೆ ಹೆಚ್ಚು ಒತ್ತು ನೀಡಿ ; ಜಿಲ್ಲಾಧಿಕಾರಿ ರವಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಮತ್ತು ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ಕೆಸ್ವಾನ್ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸಭೆಯಲ್ಲಿ ಮಂಡಿಸಲಾದ ಐ-ರಾಡ್ (I-ಖಂಆ) ವರದಿಯು ಜಿಲ್ಲೆಯ ರಸ್ತೆ ಸುರಕ್ಷತೆಯಕುರಿತು ಕಳವಳ ವ್ಯಕ್ತಪಡಿಸಿದ ಅವರು ೨೦೨೩ ರಿಂದ ೨೦೨೫ರ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೪,೧೭೩ ಅಪಘಾತಗಳು ಸಂಭವಿಸಿದ್ದು, ಇದರಲ್ಲಿ ೧,