ಮುಂಡಗೋಡ : ಪಟ್ಟಣದ ಮಾದರಿ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದ ನಂತರ ಅಸ್ವಸ್ಥರಾಗಿದ್ದು ಈ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಪಡೆಯುತ್ತಿರುವ ಹಿನ್ನಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ಹಾಗೂ ಉಪ ವಿಭಾಗದ ದಂಡಾಧಿಕಾರಿಗಳು ಕಾವ್ಯರಾಣಿ ಕೆ.ವಿ ಭೇಟಿ ನೀಡಿ ಪರಿಶೀಲನೆ ನಡೆಸಿ ಯೋಗಕ್ಷೇಮ ವಿಚಾರಿಸಿ, ವಿದ್ಯಾರ್ಥಿಗಳ ಪಾಲಕರೊಂದಿಗೆ ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮುಂಡಗೋಡ ತಹಶೀಲ್ದಾರ ,ಶಂಕರ ಗೌಡಿ ಆರೋಗ್ಯಾಧಿಕಾರಿಗಳು ಮುಂಡಗೋಡ, ಕಾರ್ಯನಿರ್ವಹಣಾಧಿಕಾರಿ ತಾಲೂಕು ಪಂಚಾಯತ ಮುಂಡಗೋಡ, ಮುಖ್ಯಾಧಿಕಾರಿ ಪಟ್ಟಣ ಪಂಚಾಯತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮುಂಡಗೋಡ, ಶಾಲೆಯ ಮುಖ್ಯೋಪಾಧ್ಯಾಯರು ಇದ್ದರು.