ಗುಂಡ್ಲುಪೇಟೆ: ಇಂಗಲವಾಡಿಯಲ್ಲಿ ಹುಲಿ ದಾಳಿಗೆ ಹಸು ಬಲಿ- ರೈತರ ಆಕ್ರೋಶ
ಹಾಡಹಗಲೇ ಮೇಯುತ್ತಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ರಕ್ತ ಹೀರಿ ಕೊಂದ ಘಟನೆ ಗುಂಡ್ಲುಪೇಟೆ ತಾಲೂಕಿನ ಇಂಗಲವಾಡಿಯಲ್ಲಿ ಭಾನುವಾರ ನಡೆದಿದೆ. ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ಹಸು ಸಾವನ್ನಪ್ಪಿದೆ. ಗುಂಡ್ಲುಪೇಟೆ ತೀರಾ ಸಮೀಪದ ಇಂಗಲವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರೈತರು ಜಮೀನುಗಳಿಗೆ ತೆರಳಲು ಭಯಪಡುವಂತಾಗಿದೆ. ಅರಣ್ಯಾಧಿಕಾರಿಗಳು ಹುಲಿ ಸೆರೆ ಹಿಡಿಯುವ ಪ್ರಯತ್ನವನ್ನೇ ಮಾಡುತ್ತಿಲ್ಲ ಎಂದು ರೈತರು ಆಕ್ರೋಶ ಹೊರಹಾಕಿದ್ದು ಹಸು ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ಕೊಡುವಂತೆ ಆಗ್ರಹಿಸಿದ್ದಾರೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದಲ್ಲಿ ಈ ದಾಳಿ ನಡೆದಿದೆ.