ಯಲ್ಲಾಪುರ: ಪಟ್ಟಣದ ಸರಕಾರಿ ಆಸ್ಪತ್ರೆಗೆ 1 ಕೋಟಿ 50 ಲಕ್ಷ ರೂಪಾಯಿ ವೆಚ್ಚದ ವಿವಿಧ ಆಪರೇಷನ್ ಉಪಕರಣಗಳನ್ನು ಶಾಸಕ ಹೆಬ್ಬಾರ್ ಹಸ್ತಾಂತರಿಸಿದರು. ನಂತರ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ಪ್ರಯೋಗಾಲಯವನ್ನು ಉದ್ಘಾಟಿಸಿ,ಈ ವೇಳೆ ಮಾತನಾಡಿದ ಶಾಸಕರು, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳಿಗೆ ಅಗತ್ಯವಾದ ಮೂಲಸೌಕರ್ಯ, ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ತಂತ್ರಜ್ಞಾನವನ್ನು ಹಂತ ಹಂತವಾಗಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.ವೈದ್ಯಾಧಿಕಾರಿ ಡಾ ನರೇಂದ್ರ ಪವಾರ,ಡಾ ಸೌಮ್ಯ ಕೆವಿ,ಇತರರು ಇದ್ದರು