ಬೇಲೂರು: ಅಡ್ಡ ಬಂದ ಬೈಕ್ ಸವಾರ
ಹಳ್ಳಕ್ಕೆ ಬಿದ್ದ ಸಾರಿಗೆ ಬಸ್! ಹಗರೆ ಬಳಿ ಘಟನೆ
Belur, Hassan | Oct 5, 2025 ಸಾರಿಗೆ ಬಸ್ ಗೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಹಳ್ಳಕ್ಕೆ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಗರೆ ಬಳಿ ನಡೆದಿದೆ. ಹಾಸನದಿಂದ ಬೇಲೂರಿನ ಕಡೆಗೆ ತೆರಳುತ್ತಿದ್ದ ಬಸ್ ಗೆ ಏಕಾಏಕಿ ಬೈಕ್ ಸವಾರ ಅಡ್ಡ ಬಂದಿದ್ದಾನೆ ಇದರಿಂದಾಗಿ ಸಂಭವಿಸಬಹುದಾದಂತಹ ಅಪಘಾತವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ