ಕಾರವಾರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ:ಕ್ರಮಕ್ಕೆ ಆಗ್ರಹಿಸಿ ನಗರದ ಡಿಸಿ ಕಚೇರಿ ಬಳಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ವಿವಿಧ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿದ್ದವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಕಲ್ಪಿಸುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮವಾಗಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಘಟಕದ ಪದಾಧಿಕಾರಿಗಳು ಬುಧವಾರ ಮಧ್ಯಾಹ್ನ 1.30ರವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.