ಕೋಲಾರ: ದೇಶಕ್ಕೆ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ನಗರದಲ್ಲಿ ಶ್ರದ್ಧಾಂಜಲಿ
Kolar, Kolar | Aug 17, 2025 ಕೋಲಾರ ಜಯನಗರದ ಡಾ. ಬಿಆರ್ ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ ಯೋಧರ ಸ್ಮಾರಕದ ಬಳಿ ದೇಶಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಅಂಕಿತ್ ಕುಮಾರ್ ,ಅರುಣ್ ಕುಮಾರ್ ಹಾಗೂ ITBP ಲಾಲು ಯಾದವ್ ರವರ ಭಾವಚಿತಕ್ಕೆ ಭಾನುವಾರ ಸಂಜೆ 7 ಗಂಟೆ ಸಮಯದಲ್ಲಿ ಪುಷ್ಪಾರ್ಚನೆ ಸಲ್ಲಿಸಿ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭಾ ಸದಸ್ಯ ಮುರಳಿಗೌಡ, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ, ಗಡಿ ಕಾಯುವ ಯುವಕರಿಂದ ನಾವು ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.