ತೀರ್ಥಹಳ್ಳಿ: ಬಚನಕೊಡಿಗೆ ಗ್ರಾಮದಲ್ಲಿ ಬಿಬಿಎ ವ್ಯಾಸಂಗದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ತೃತೀಯ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರುಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೇಜುವಳ್ಳಿ ಸಮೀಪದ ಬಚ್ಚನಕೊಡಿಗೆ ಗ್ರಾಮದಲ್ಲಿ ಶುಕ್ರವಾರ ನಡೆದಿದ್ದು ಶನಿವಾರ ಮಾಹಿತಿ ಲಭ್ಯವಾಗಿದೆ. ಬಚ್ಚನಕೊಡಿಗೆ ಗ್ರಾಮದ ರಮೇಶ್ ಆಚಾರ್ಯ ಎಂಬುವವರ ಪುತ್ರಿ 21 ವರ್ಷದ ಪ್ರಾಪ್ತಿ ಬಾಳೆಬೈಲು ಕಾಲೇಜಿನಲ್ಲಿ ತೃತೀಯ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಇನ್ಮಾ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಪ್ರಾಪ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ತೀರ್ಥಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದೆ.