ಗ್ರಾಮ ಒನ್ ಸಿಬ್ಬಂದಿಗೆ ತಹಶೀಲ್ದಾರ್ ಖಡಕ್ ಎಚ್ಚರಿಕೆ: ಪ್ರಜಾಸೇವಾ ಕಾರ್ಯಕ್ರಮದಲ್ಲಿ 270 ಅರ್ಜಿ ಸಲ್ಲಿಕೆ
ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ತಹಶೀಲ್ದಾರ್ ಶೃತಿ ಅವರು, ಗ್ರಾಮ ಒನ್ ಸಿಬ್ಬಂದಿ ಮಾನವೀಯತೆಯಿಂದ ವರ್ತಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಕಾರ್ಯಕ್ರಮದಲ್ಲಿ ಒಟ್ಟು 270 ಅರ್ಜಿಗಳು ಸ್ವೀಕೃತವಾಗಿವೆ.