ರಬಕವಿ-ಬನಹಟ್ಟಿ: ನಿರಂತರ ಮಳೆ ಪರಿಣಾಮ ಮಹಾಲಿಂಗಪುರದಲ್ಲಿ ಮನೆಯ ಗೋಡೆ ಕುಸಿದು ಬಾಲಕ ಸಾವು
ಮುಂಜಾನೆಯಿAದ ಮಹಾಲಿಂಗಪುರದ ಪಟ್ಟಣದಲ್ಲಿ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಪಟ್ಟಣದ ಅಂಬೇಡ್ಕರ್ ಸರ್ಕಲ್ ಹತ್ತಿರ ಮನೆ ಗೋಡೆ ಕುಸಿದು ೧೧ ವರ್ಷದ ಬಾಲಕ ದರ್ಶನ್ ಲಾತೂರ ಮೃತಪಟ್ಟಿದ್ದಾನೆ. ಬಾಲಕನ ಕುಟುಂಬ ಪತ್ರಾಸ್ ಮನೆಯಲ್ಲಿ ವಾಸವಿದ್ದು, ಶನಿವಾರ ಬೆಳಗಿನ ಜಾವ ೫ ಗಂಟೆ ಸುಮಾರಿಗೆ ಇವರ ಬದಿಯ ಮನೆಯ ಗೋಡೆ ಕುಸಿದು ಪತ್ರಾಸ್ ಮೇಲೆ ಬಿದ್ದಿದೆ. ಪತ್ರಾಸ್ ಕೆಳಗೆ ಮಲಗಿದ್ದ ಬಾಲಕ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಲಕನ ತಾಯಿ ರೂಪಾ, ಸಹೋದರಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.