ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಡಾ.ಆಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಗುರುವಾರ ಬೆಳಗ್ಗೆ 11 ಗಂಟೆಗೆ ಬೇಟಿ ನೀಡಿದ ಆಕಾಶ್ ಅವರು ಜಲಜೀವನ್ ಮಿಷನ್ (ಜೆಜೆಎಂ) ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಡಾ.ಎಸ್.ಆಕಾಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಜೆಜೆಎಂ ಪೈಪ್ಲೈನ್ ಮೂಲಕವೇ ಪ್ರತಿ ಮನೆ ಮನೆಗೂ ನಳ ಸಂಪರ್ಕದ ಮೂಲಕ ಕುಡಿಯುವ ನೀರು ಸರಬರಾಜು ಮಾಡಿ ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು