ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಆಯೋಜಿಸಿದ್ದ "70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದ ಅವರು, ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.