ಹುಬ್ಬಳ್ಳಿ: ಚಲಿಸುತ್ತಿದ್ದ ಕಾರಿಗೆ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ಕಾರ್ ಬೆಂಕಿಯಲ್ಲಿ ಧಗ ಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಮುಂಭಾಗದಲ್ಲಿ ನಡೆದಿದೆ.ಕಾರಿನಲ್ಲಿ ತಾಂತ್ರಿಕ ದೋಷದಿಂದ ಮೊದಲಿಗೆ ಹೊಗೆ ಕಂಡು ಬಂದಿದೆ, ನಂತರ ಏಕಾಏಕಿಯಾಗಿ ಕಾರಿನ ಇಂಜಿನ್ ಭಾಗದಲ್ಲಿ ಬೆಂಕಿ ಹೊತ್ತುಕೊಂಡು ಧಗ ಧಗ ಉರಿದಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಬಂದು ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.